ಬೆಂಗಳೂರು: ಪೆಟ್ರೋಲ್-ಡೀಸೆಲ್ ದರ ಏರಿಕೆ ಕಾರಣದಿಂದಾಗಿ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಿಸಲಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೆಎಸ್ಸಾರ್ಟಿಸಿ ಟಿಕೆಟ್ ದರ ಹೆಚ್ಚಳ ಸಾಧ್ಯತೆ ಬಗೆಗಿನ ಸುದ್ದಿ ಕುರಿತು ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ. ಇಲಾಖೆಯೊಂದಿಗೆ ಚರ್ಚೆ ಮಾಡಬೇಕು ಎಂದು ಅವರು ತಿಳಿಸಿದರು.
ಗ್ಯಾರೆಂಟಿ ಯೋಜನೆಗಳಿಗೆ ಹಣ ನೀಡಲು ತೈಲ ಬೆಲೆ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರಿ, ಅಬಕಾರಿ, ತೈಲ ಮುಂತಾದವು ಆರ್ಥಿಕ ಮೂಲಗಳಾಗಿವೆ. ಅಭಿವೃದ್ಧಿ ವಿಚಾರದಲ್ಲಿ ಕೈಗೊಂಡ ನಿರ್ಧಾರವಾಗಿದೆ ಎಂದು ಸ್ಪಷ್ಟನೆ ನೀಡಿದರು.