ಬೆಂಗಳೂರು: ಸಿದ್ದರಾಮಯ್ಯ ಒಬ್ಬ ಮುಖ್ಯಮಂತ್ರಿ ಆಗಿ ಅಲ್ಪಸಂಖ್ಯಾತರಿಗೆ ಹಣ ಕೊಡಲು ನಮ್ಮ ಅಭ್ಯಂತರ ಇಲ್ಲ. ಆದರೆ 10 ಸಾವಿರ ಕೋಟಿ ರೂಪಾಯಿ ಕೊಡ್ತೀನಿ ಎಂದು ಅಲ್ಪಸಂಖ್ಯಾತರ ಓಲೈಕೆ ಮಾಡ್ತಿರೋದು ಶೋಭೆ ತರಲ್ಲ ಎಂದು ಮಾಜಿ ಸಿಎಂ ಬಿ.ಎಸ.ಯಡಿಯೂರಪ್ಪ ಹೇಳಿದ್ದಾರೆ.
ಸಿಎಂ ಅವರ ಘೋಷಣೆ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಈ ರೀತಿಯ ಅಲ್ಪಸಂಖ್ಯಾತರ ತುಷ್ಟೀಕರಣ ಸರಿಯಲ್ಲ. ಓಲೈಕೆ ರಾಜಕಾರಣದಿಂದ ಚುನಾವಣೆ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿ ಇದ್ದರೆ ಅದು ಸಾಧ್ಯವಿಲ್ಲ ಎಂದಿದ್ದಾರೆ.
ಸಿದ್ದರಾಮಯ್ಯ ಒಬ್ಬ ಮುಖ್ಯಮಂತ್ರಿ ಆಗಿ ಅಲ್ಪಸಂಖ್ಯಾತರಿಗೆ ಹಣ ಕೊಡಲು ನಮ್ಮ ಅಭ್ಯಂತರ ಇಲ್ಲ. ಆದರೆ 10 ಸಾವಿರ ಕೋಟಿ ರೂಪಾಯಿ ಕೊಡ್ತೀನಿ ಎಂದು ಅಲ್ಪಸಂಖ್ಯಾತರ ಓಲೈಕೆ ಮಾಡ್ತಿರೋದು ಶೋಭೆ ತರಲ್ಲ. ಈ ರೀತಿಯ ಅಲ್ಪಸಂಖ್ಯಾತರ ತುಷ್ಟೀಕರಣ ಸರಿಯಲ್ಲ. ಓಲೈಕೆ ರಾಜಕಾರಣದಿಂದ ಚುನಾವಣೆ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿ ಇದ್ದರೆ ಅದು ಸಾಧ್ಯವಿಲ್ಲ.
— BJP Karnataka (@BJP4Karnataka) December 6, 2023



























































