‘ಪುಷ್ಪ 2’ ಸಿನಿಮಾ ಇದೀಗ ಸಿನಿಲೋಕದ ಕುತೂಹಲದ ಕೇಂದ್ರಬಿಂದುವಾಗಿದೆ. ‘ಪುಷ್ಪ 2’ ಸಿನಿಮಾದ ಎರಡನೇ ವಿಡಿಯೊ ಲಿರೀಕಲ್ ಹಾಡು ಬುಧವಾರ ಬಿಡುಗಡೆಯಾಗಿದ್ದು, ರಶ್ಮಿಕಾ ಮಂದಣ್ಣ ಈ ಹಾಡಿನಲ್ಲಿ ಎಲ್ಲರ ಗಮನಸೆಳೆದಿದ್ದಾರೆ.
ಬಹು ನಿರೀಕ್ಷಿತ ‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳಂ, ಬೆಂಗಾಲಿ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು, ಈ ಹಾಡು ಬಿಡುಗಡೆಯಾಗಿ ಕೆಲವೇ ಗಂಟೆಗಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ. ನಿರ್ದೇಶಕ ಸುಕುಮಾರ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ರಾಗ ಸಂಯೋಜಿಸಿರುವ ಈ ಹಾಡನ್ನು ‘ಟಿ ಸಿರೀಸ್’ ಮೂಲಕ ಬಿಡುಗಡೆಯಾಗಿದೆ. ನಟ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

























































