ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ 10 ಮಂದಿ ಸಾವನ್ನಪ್ಪಿದ್ದರು. ಇದು ಕೋವಿಡ್ ಕಾರಣದಿಂದಾಗಿ ಮೃತಪಟ್ಟಿಲ್ಲ .ಅವರು ವಿವಿಧ ವ್ಯಾಧಿಗಳಿಂದ ಬಳಲುತ್ತಿದ್ದರು. ಹೀಗಾಗಿ ಸಾವನ್ನಪ್ಪಿದ್ದಾರೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಹಿತಿ ಹಂಚಿಕೊಂಡ ಅವರು, ಮೃತಪಟ್ಟ 10 ಮಂದಿಯಲ್ಲಿ 9 ಮಂದಿ ಬೇರೆ ಬೇರೆ ಅಂದರೆ ಹೃದಯ ಸಂಬಂಧಿ, ಕಿಡ್ನಿ ಹೀಗೆ ಹಲವಾರ ಕಾಯಿಲೆಗಳಿಂದ ಬಳಲುತ್ತಿದ್ದರು. ಇವರ ಸಾವಿಗೂ ಕೋವಿಡ್‍ಗೂ ಸಂಬಂಧವೇ ಇಲ್ಲ ಎಂದು ಹೇಳಿದರು.
ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ ಬೇರೆ ಆರೋಗ್ಯದ ಸಮಸ್ಯೆಗಳಿದ್ದವು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ಸಚಿವರು ತಿಳಿಸಿದರು.