ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಏನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ.
ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದ ಎರಡನೆಯ ಮಹಡಿಯಲ್ಲಿ ನಿದ್ರೆ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ತಕ್ಷಣ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್ ಪ್ರಾಣಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.