ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಬೇಕೆಂಬ ಹೋರಾಟ ಬಿರುಸುಗೊಳ್ಳುತ್ತಿದ್ದಂತೆಯೇ ಒಕ್ಕಲಿಗ ಸಮುದಾಯದ ಮುಖಂಡರೂ ಅಖಾಡಕ್ಕಿಳಿದಿದ್ದಾರೆ. ತಮ್ಮ ಸಮುದಾಯಕ್ಕೂ ಮೀಸಲಾತಿ ಹೆಚ್ಚಿಸಬೇಕೆಂದು ಆಗ್ರಹಿಸಿ ಅಭಿಯಾನವನ್ನು ಒಕ್ಕಲಿಗ ಸಮುದಾಯದ ನಾಯಕರು ಆರಂಭಿಸಿದ್ದಾರೆ.
ಇದೇ ಸಂದರ್ಭದಲ್ಲಿ, ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಸಮುದಾಯದ ಬಿಜೆಪಿ ಸರ್ಕಾರದ ಸಚಿವರು ಹಾಗೂ ಶಾಸಕರು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅವರಿಗೆ ಮನವಿ ಸಲ್ಲಿಸಿತು.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಚಿವ ಡಾ.ಸುಧಾಕರ್, ಒಕ್ಕಲಿಗ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರು ಸಾಕಷ್ಟು ಜನರಿದ್ದು, ಅವರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ.
ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಸಮುದಾಯದ ನಮ್ಮ ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರು ಇಂದು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರನ್ನು ಭೇಟಿ ಮಾಡಿ ಅವರಿಗೆ ಮನವಿ ಸಲ್ಲಿಸಲಾಯಿತು.
ಒಕ್ಕಲಿಗ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರು ಸಾಕಷ್ಟು ಜನರಿದ್ದು, ಅವರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. pic.twitter.com/OhtcDgcoMX
— Dr Sudhakar K (Modi ka Parivar) (@DrSudhakar_) December 23, 2022
























































