ನವದೆಹಲಿ: ಸಂಸತ್ತಿನಲ್ಲಿಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆಯಾಗಿದೆ. ಪ್ರತಿಪಕ್ಷಗಳ ವಿರೋಧದ ನಡುವೆಯೇ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಬಗ್ಗೆ ಕೇಂದ್ರ ಸರ್ಕಾರವು ಸಚಿವ ಸಂಪುಟದ ಅನುಮೋದನೆ ಪಡೆದು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
VIDEO | One Nation, One Election Bill: “I oppose this draconian and unconstitutional bill. This bill indirectly introduces presidential style of democracy, this bill is based on maximizing political gain and convenience. This bill will finish off regional parties. This bill is… pic.twitter.com/Q2SoCe29lx
— Press Trust of India (@PTI_News) December 17, 2024
ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಲೋಕಸಭೆಯಲ್ಲಿ ಮಂಗಳವಾರ ಈ ಮಸೂದೆಯನ್ನು ಮಂಡಿಸಿದರು. ಈ ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆಯು ಸರ್ವಾಧಿಕಾರ ಹೇರುವ ಪ್ರಯತ್ನವಾಗಿದೆ ಎಂದು ಪ್ರತಿಪಕ್ಷಗಳು ಮೋದಿ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿವೆ.