ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ವಿಸ್ತಾರವಾಗುತ್ತಿದ್ದು, ನಿತ್ಯದ ಸೋಂಕಿನ ಪ್ರಮಾಣ ೧೦ ಸಾವಿರಕ್ಕೆ ಸಮೀಪಿಸುತ್ತಿದೆ. ಬುಧವಾರ ಬರೋಬ್ಬರಿ 9540 ಮನದಿಯ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,21,730ಕ್ಕೆ ಏರಿಕೆಯಾಗಿದೆ.
ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯ ನಡುವಿನ ಅಂಕಿ ಅಂಶಗಳನ್ನಾಧರಿಸಿ ಆರೋಗ್ಯ ಇಲಾಖೆ ಈ ಮಾಹಿತಿಯನ್ನು ನೀಡಿದೆ. ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3419 ಹೊಸ ಪ್ರಕರಣಗಳು ವರದಿಯಾಗಿದೆ.
ಇದೇ ವೇಳೆ, ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯ ನಡುವೆ ರಾಜ್ಯದಲ್ಲಿ 128 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6808ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.