ಬೆಂಗಳೂರು: ಬಿಜೆಪಿಯ ಹಿರಿಯ ಲಿಂಗಾಯತ ನಾಯಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಇಂದು ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Former BJP CM,
Former BJP President,
Former Leader of Opposition,
Six times MLA,Sh. Jagadish Shettar joins the Congress family today in the presence of CP @kharge ji, Gen. Sec (Org) @kcvenugopalmp ji, PCC President @DKShivakumar ji & Congress in-charge, Karnataka @rssurjewala… pic.twitter.com/gY4wysOgzx
— Congress (@INCIndia) April 17, 2023
ಜಗದೀಶ್ ಶೆಟ್ಟರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮೊದಲಾದವರು ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಜಗದೀಶ್ ಶೆಟ್ಟರ್ ಅವರಿಗೆ ಈ ಬಾರಿ ಬಿಜೆಪಿ ಪಕ್ಷ ಟಿಕೆಟ್ ನೀಡಿಲ್ಲ. ಇದರಿಂದ ಆಕ್ರೋಶಗೊಂಡಿರುವ ಜಗದೀಶ್ ಶೆಟ್ಟರ್ ಅವರು ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿಗೂ ಗುಡ್ ಬೈ ಹೇಳಿರುವ ಅವರು ಭಾನುವಾರ ತಮ್ಮ ಬೀಗರೂ ಆದ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರ ನಿವಾಸದಲ್ಲಿ ತಡರಾತ್ರಿವರೆಗೂ ಕೈ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.
ಟಿಕೆಟ್ ಸಿಗದಿದ್ದರಿಂದ ಬೇಸತ್ತು ಕಾಂಗ್ರೆಸ್ ಸೇರಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್ ಸೇರ್ಪಡೆಯಾದ ರೀತಿಯಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರು ಕೂಡಾ ಕೈ ಗರಡಿ ಸೇರಿದ್ದಾರೆ.