ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
‘ಆಪರೇಷನ್ ಸಿಂಧೂರ’ವನ್ನು ಸ್ವಾಗತಿಸಿರುವ ಕಾಂಗ್ರೆಸ್, ಸೇನೆಯ ದೃಢನಿಶ್ಚಯ ಮತ್ತು ಧೈರ್ಯವನ್ನು ಶ್ಲಾಘಿಸಿದೆ. ‘ಆಪರೇಷನ್ ಸಿಂಧೂರ’ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಪಾಕಿಸ್ತಾನ ಮತ್ತು ಪಿಒಕೆಯಿಂದ ಹೊರಹೊಮ್ಮುವ ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಭಾರತವು ದೃಢವಾದ ರಾಷ್ಟ್ರೀಯ ನೀತಿಯನ್ನು ಹೊಂದಿದೆ ಎಂದಿದ್ದಾರೆ.
ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಮುಚ್ಚಿಹಾಕಿರುವ ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ. ಅವರ ದೃಢನಿಶ್ಚಯ ಮತ್ತು ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ ಎಂದು ಖರ್ಗೆ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಬರೆದುಕೊಂಡಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ದಿನದಿಂದ, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಯಾವುದೇ ನಿರ್ಣಾಯಕ ಕ್ರಮ ಕೈಗೊಳ್ಳಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಶಸ್ತ್ರ ಪಡೆಗಳು ಮತ್ತು ಸರ್ಕಾರದೊಂದಿಗೆ ಸ್ಪಷ್ಟವಾಗಿ ನಿಂತಿದೆ ಎಂದಿರುವ ಖರ್ಗೆ, ರಾಷ್ಟ್ರೀಯ ಏಕತೆ ಮತ್ತು ಒಗ್ಗಟ್ಟು ಇಂದಿನ ಅಗತ್ಯವಾಗಿದೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಮ್ಮ ಸಶಸ್ತ್ರ ಪಡೆಗಳೊಂದಿಗೆ ನಿಂತಿದೆ. ನಮ್ಮ ನಾಯಕರು ಹಿಂದೆ ಮಾರ್ಗವನ್ನು ತೋರಿಸಿದ್ದಾರೆ ಮತ್ತು ರಾಷ್ಟ್ರೀಯ ಹಿತಾಸಕ್ತಿ ನಮಗೆ ಅತ್ಯುನ್ನತವಾಗಿದೆ ಎಂದಿದ್ದಾರೆ.
India has an unflinching National Policy against all forms of terrorism emanating from Pakistan and PoK.
We are extremely proud of our Indian Armed Forces who have stuck terror camps in Pakistan and PoK. We applaud their resolute resolve and courage.
Since the day of the…
— Mallikarjun Kharge (@kharge) May 7, 2025