ಬೆಂಗಳೂರು: ಕೋವಿಡ್ ಪರಿಸ್ಥಿತಿಯಲ್ಲಿ ಪರಿಸ್ಥಿತಿ ಅವಲೋಕಿಸುವ ಸಂಬಂಧ ಅಧಿಕಾರಿಗಳ ಸಭೆ ನಡೆಸಲು ಮುಂದಾಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪ್ರಯತ್ನಕ್ಕೆ ಸರ್ಕಾರ ಅಡ್ಡಗಾಲು ಹಾಕಿದೆ. ಪ್ರತಿಪಕ್ಷ ನಾಯಕರು ಕರೆದಿರುವ ಸಭೆಯಲ್ಲಿ ಭಾಗವಹಿಸದಂತೆ ಮುಖ್ಯಕಾರ್ಯದರ್ಶಿಯವರು ಡಿಸಿ, ಎಸ್ಪಿ, ಆಯುಕ್ತರು ಸಹಿತ ವಿವಿಧ ಅಧಿಕಾರಿಗಳಿಗೆ ಸೂಚಿಸಿದ್ದು ಈ ಬೆಳವಣಿಗೆಯಿಂದಾಗಿ ರಾಜ್ಯದಲ್ಲಿ ಆಡಳಿತ-ಪ್ರತಿಪಕ್ಷಗಳ ನಡುವಿನ ಗುದ್ದಾಟ ತಾರ್ಕಿಕ ಘಟ್ಟಕ್ಕೆ ತಲುಪಿದೆ.
ರಾಜ್ಯ ಸರ್ಕಾರದ ಈ ನಡೆಯಿಂದಾಗಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನನಗೆ ಪತ್ರ ಬರೆದು ವಿರೋಧ ಪಕ್ಷದ ನಾಯಕರು ಸಭೆ ನಡೆಸಬಾರದು. ಬೇಕಿದ್ದರೆ ಪತ್ರ ಬರೆದು ಮಾಹಿತಿ ಪಡೆಯಬಹುದಾಗಿ ಸಿಎಂಅನುಮೋದನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಕೋವಿಡ್ 2ನೇ ಅಲೆ ಪ್ರಾರಂಭವಾದ ಮೇಲೆ ಸರ್ಕಾರಕ್ಕೆ 12 ಪತ್ರಗಳನ್ನು ಬರೆದಿದ್ದೇನೆ. ಇವುಗಳಲ್ಲಿ ಒಂದಕ್ಕಾದರೂ ಉತ್ತರ ನೀಡಿದ್ದೀರಾ ಸಿಎಂ ಅವರೇ? ಪತ್ರಗಳಿಗೆ ಉತ್ತರವಿಲ್ಲ, ಅಧಿಕಾರಿಗಳಿಂದ ಮಾಹಿತಿ ಪಡೆಯಲು ಅವಕಾಶವಿಲ್ಲ ಎಂದಾದರೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಎಂಬ ಅನುಮಾನ ಮೂಡುತ್ತದೆ ಎಂದಿದ್ದಾರೆ.
ಕೋವಿಡ್ 2ನೇ ಅಲೆ ಪ್ರಾರಂಭವಾದ ಮೇಲೆ ಸರ್ಕಾರಕ್ಕೆ ೧೨ ಪತ್ರಗಳನ್ನು ಬರೆದಿದ್ದೇನೆ. ಇವುಗಳಲ್ಲಿ ಒಂದಕ್ಕಾದರೂ ಉತ್ತರ ನೀಡಿದ್ದೀರಾ @CMofKarnataka ಅವರೇ?
ಪತ್ರಗಳಿಗೆ ಉತ್ತರವಿಲ್ಲ, ಅಧಿಕಾರಿಗಳಿಂದ ಮಾಹಿತಿ ಪಡೆಯಲು ಅವಕಾಶವಿಲ್ಲ ಎಂದಾದರೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಎಂಬ ಅನುಮಾನ ಮೂಡುತ್ತದೆ. 3/6#COVID19— Siddaramaiah (@siddaramaiah) May 20, 2021
ಆಸ್ಪತ್ರೆ, ಬೆಡ್‌ಗಳು, ವೆಂಟಿಲೇಟರ್, ಆಕ್ಸಿಜನ್ನು, ಅಗತ್ಯ ಔಷಧಗಳು ಸಿಗದೆ ಜನ ಹಾದಿ ಬೀದಿಗಳಲ್ಲಿ ಸಾವಿಗೀಡಾಗುತ್ತಿದ್ದಾರೆ. ಕಡೆಗೆ ಕೋವಿಡ್ ಪರಿಸ್ಥಿತಿ ನಿಯಂತ್ರಿಸಲು ಸರ್ಕಾರದಿಂದಾಗದು ಎಂದು ತಿಳಿದ ನ್ಯಾಯಾಲಯಗಳು ಮಧ್ಯಪ್ರವೇಶಿಸಿದವು.
ಸರ್ಕಾರ ಜೀವಂತವಾಗಿದ್ದರೆ ಇಂಥಾ ಸ್ಥಿತಿ ಬರುತ್ತಿತ್ತೇ ಎಂದು ಅವರು ಪ್ರಶ್ನಿಸಿದ್ದಾರೆ.
ಆಸ್ಪತ್ರೆ, ಬೆಡ್‌ಗಳು, ವೆಂಟಿಲೇಟರ್, ಆಕ್ಸಿಜನ್ನು, ಅಗತ್ಯ ಔಷಧಗಳು ಸಿಗದೆ ಜನ ಹಾದಿ ಬೀದಿಗಳಲ್ಲಿ ಸಾವಿಗೀಡಾಗುತ್ತಿದ್ದಾರೆ. ಕಡೆಗೆ ಕೋವಿಡ್ ಪರಿಸ್ಥಿತಿ ನಿಯಂತ್ರಿಸಲು ಸರ್ಕಾರದಿಂದಾಗದು ಎಂದು ತಿಳಿದ ನ್ಯಾಯಾಲಯಗಳು ಮಧ್ಯಪ್ರವೇಶಿಸಿದವು.
ಸರ್ಕಾರ ಜೀವಂತವಾಗಿದ್ದರೆ ಇಂಥಾ ಸ್ಥಿತಿ ಬರುತ್ತಿತ್ತೇ @BJP4Karnataka? 4/6#COVID19— Siddaramaiah (@siddaramaiah) May 20, 2021
ಅಧಿಕಾರಿಗಳ ಕಾರ್ಯವೈಖರಿಗಳ ಕುರಿತು ಪರಿಶೀಲನೆ ನಡೆಸುವ, ನಿರ್ದೇಶನ ನೀಡುವ ಉದ್ದೇಶ ನನಗಿರಲಿಲ್ಲ. ಅಷ್ಟರಮಟ್ಟಿಗಿನ ಸಾಂವಿಧಾನಿಕ ಅರಿವು ನನಗಿದೆ.
ಕಳೆದ 2 ವರ್ಷಗಳಿಂದ ನಾನು ಕೇಳುವ ಮಾಹಿತಿ ಒಂದಾದರೆ, ಅಧಿಕಾರಿಗಳು ನೀಡುವ ಮಾಹಿತಿ ಇನ್ನೊಂದು. ಈ ಕಾರಣಕ್ಕಾಗಿಯೇ ಮುಖತಃ ಮಾಹಿತಿ ಪಡೆಯಲು ಅವಕಾಶ ಕೇಳಿದ್ದೆ ಎಂದು ಅವರು ನೆನಪಿಸಿದ್ದಾರೆ.
ಅಧಿಕಾರಿಗಳ ಕಾರ್ಯವೈಖರಿಗಳ ಕುರಿತು ಪರಿಶೀಲನೆ ನಡೆಸುವ, ನಿರ್ದೇಶನ ನೀಡುವ ಉದ್ದೇಶ ನನಗಿರಲಿಲ್ಲ. ಅಷ್ಟರಮಟ್ಟಿಗಿನ ಸಾಂವಿಧಾನಿಕ ಅರಿವು ನನಗಿದೆ.
ಕಳೆದ 2 ವರ್ಷಗಳಿಂದ ನಾನು ಕೇಳುವ ಮಾಹಿತಿ ಒಂದಾದರೆ, ಅಧಿಕಾರಿಗಳು ನೀಡುವ ಮಾಹಿತಿ ಇನ್ನೊಂದು. ಈ ಕಾರಣಕ್ಕಾಗಿಯೇ ಮುಖತಃ ಮಾಹಿತಿ ಪಡೆಯಲು ಅವಕಾಶ ಕೇಳಿದ್ದೆ. 5/6#COVID19— Siddaramaiah (@siddaramaiah) May 20, 2021
ಈ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಝೂಮ್ ಮೂಲಕ ಹಾಜರಾಗಿ ಮಾಹಿತಿ ನೀಡಲು ನಿರ್ದೇಶನ ನೀಡಬೇಕೆಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ.
ಇಲ್ಲದಿದ್ದರೆ ಜನರ ಹಿತಾಸಕ್ತಿಯನ್ನು ರಕ್ಷಿಸಲು ಯಾವುದೇ ರೀತಿಯ ಸಂಸದೀಯ, ಸಂವಿಧಾನಾತ್ಮಕ ಸಂಘರ್ಷಕ್ಕೆ ಬೇಕಾದರೂ ಇಳಿಯಲು ಸಿದ್ಧವಾಗಬೇಕಾಗುತ್ತದೆ ಎಂಬ ಸಂದೇಶವನ್ನು ಸಿದ್ದರಾಮಯ್ಯ ಅವರು ರವಾನಿಸಿದ್ದಾರೆ.
ಆದ್ದರಿಂದ ಈ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಝೂಮ್ ಮೂಲಕ ಹಾಜರಾಗಿ ಮಾಹಿತಿ ನೀಡಲು ನಿರ್ದೇಶನ ನೀಡಬೇಕೆಂದು @CMofKarnataka ಅವರನ್ನು ಆಗ್ರಹಿಸುತ್ತೇನೆ.
ಇಲ್ಲದಿದ್ದರೆ ಜನರ ಹಿತಾಸಕ್ತಿಯನ್ನು ರಕ್ಷಿಸಲು ಯಾವುದೇ ರೀತಿಯ ಸಂಸದೀಯ, ಸಂವಿಧಾನಾತ್ಮಕ ಸಂಘರ್ಷಕ್ಕೆ ಬೇಕಾದರೂ ಇಳಿಯಲು ಸಿದ್ಧವಾಗಬೇಕಾಗುತ್ತದೆ. 6/6#COVID19— Siddaramaiah (@siddaramaiah) May 20, 2021