ಬೆಳಗಾವಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಸಾವಿನ ದುರಂತದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಎರಡು ಕಡೆ ಭೀಕರ ದುರಂತ ಸಂಭವಿಸಿದೆ. ಕಲಬುರಗಿ ಹಾಗೂ ಬೆಳಗಾವಿ ಜಿಲ್ಲೆಯಲ್ಲೂ ಆಕ್ಸಿಜನ್ ಕೊರತೆಯಿಂದ ರೋಗಿಗಳು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.
ಕಲಬುರಗಿ ಜಿಲ್ಲೆ ಅಫ್ಜಲ್‌ಪುರದ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಆಮ್ಲಜನಕ ಸಿಗದೆ ನಾಲ್ವರು ರೋಗಿಗಳು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದರ ಬೆನ್ನಲ್ಲೇ ಬೆಳಗಾವಿಯ ಆಸ್ಪತ್ರೆಯಲ್ಲೂ ಮೂವರು ರೋಗಿಗಳು ಆಮ್ಲಜನಕ ಕೊರತೆಯಿಂದ ಅಸುನೀಗಿದ್ದಾರೆ ಎಂಬ ಸುದ್ದಿ ಹರಿದಾಡಿದೆ.
ಬೆಳಗಾವಿಯಲ್ಲಿ ಬೆಡ್, ಆಕ್ಸಿಜನ್ ಸಿಗದೆ ಆಂಬ್ಯುಲೆನ್ಸ್‌ನಲ್ಲೇ ಕೆಲವು ರೋಗಿಗಳು ಸಾನ್ಬಪ್ಪಿದ್ದಾರೆ ಎನ್ನಲಾಗಿದ್ದು ಈ ಕುರಿತಂತೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.