ಬೆಂಗಳೂರು: ಪಾದರಾಯನಪುರ ವಾರ್ಡ್’ನ ಪ್ರಮುಖ ರಸ್ತೆಗಳಿಗೆ ಮುಸ್ಲಿಂ ಗಣ್ಯರ ಹೆಸರಿಡುವ ಪ್ರಸ್ತಾಪಕ್ಕೆ ಸಂಸದರ ಅಸ್ಕೇಪಾ ವ್ಯಕ್ತವಾಗುತ್ತಿದ್ದಂತೆಯೇ ಬಿಬಿಎಂಪಿ ಕೂಡಾ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಪಾದರಾಯಣಪುರ 9ನೇ ರಸ್ತೆ ಮತ್ತು 2 ವೃತ್ತಗಳಿಗೆ ಸಮಾಜ ಸೇವಕರ ಹೆಸರಿಡಲು ಸಲ್ಲಿಸಿರುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ನಾಮಕರಣ ಪ್ರಕ್ರಿಯೆ ರದ್ದುಗೊಳಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಗೆ ಪ್ರಸ್ತಾಪವನೆ ಸಲ್ಲಿಸಿದ್ದಾರೆ.
ಸೆಪ್ಟೆಂಬರ್ 8 ರಂದು ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಪಾದರಾಯನಪುರ ವಾರ್ಡ್’ನ 9 ರಸ್ತೆ ಹಾಗೂ ಎರಡು ವೃತ್ತಗಳಿಗೆ ಸಮಾಜ ಸೇವಕರ ಹೆಸರುಗಳ ನಾಮಕರಣಕ್ಕೆ ನಿರ್ಣಯ ಅಂಗೀಕರಿಸಲಾಗಿತ್ತು. ಈ ನಿರ್ಧಾರಕ್ಕೆ ಸಂಸದರಾದ ಅನಂತ ಕುಮಾರ್ ಹೆಗಡೆ, ಪಿಸಿ ಮೋಹನ್, ತೇಜಸ್ವಿ ಸೂರ್ಯ ಹಾಗೂ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನಾಮಕರಣ ಪ್ರಕ್ರಿಯೆ ರದ್ದುಗೊಳಿಸುವಂತೆ ಬಿಬಿಎಂಪಿ ಆಯುಕ್ತರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.