ಚಿಕ್ಕಮಗಳೂರು : ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಎಂ.ಕೃಷ್ಣ, ಸುಧಾಮೂರ್ತಿ ಸೇರಿದಂತೆ ಕರುನಾಡಿನ ಸಾಧಕರನ್ನು ಅಭಿನಂಧಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಬಂದ ನಂತರ ಈ ಉನ್ನತ ಪ್ರಶಸ್ತಿಗಳು ಜನರ ಭಾವನೆಯಿಂದ ಹೆಸರುವಾಸಿಯಾಗಿರುವವರಿಗೆ ಸಿಗುತ್ತಿದೆ. ಈ ಮೂಲಕ ಪದ್ಮಶ್ರೀ ಪ್ರಶಸ್ತಿಯ ಹಿರಿಮೆ-ಗರಿಮೆ ಹೆಚ್ಚಾಗಿದೆ ಎಂದು ಬಣ್ಣಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಭಿಪ್ರಾಯ ಹಂಚಿಕೊಂಡ ಸಿ.ಟಿ.ರವಿ, ಈಗ ಪದ್ಮಶ್ರೀ ಪ್ರಶಸ್ತಿ ಪೀಪಲ್ ಪ್ರಶಸ್ತಿಯಾಗಿ ಹಿರಿಮೆಯನ್ನು ಹೆಚ್ಚಿಸಿಕೊಂಡಿದೆ ಎಂದರು.
ಮುತ್ಸದ್ದಿ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ಎಸ್.ಎಂ.ಕೃಷ್ಣ ಗೆ ಪದ್ಮವಿಭೂಷಣ ಪ್ರಶಸ್ತಿ ಸಿಕ್ಕಿರುವುದು ಅರ್ಥಪೂರ್ಣ, . ಶ್ರೀಮಂತಿಕೆಯನ್ನು ಸೇವೆಗೆ ಸಮರ್ಪಿಸಿರುವ ಸುಧಾಮೂರ್ತಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಚಾಪು ಮೂಡಿಸಿರುವ ಎಸ್.ಎಲ್.ಭೈರಪ್ಪ ಅವರಿಗೆ ಅತ್ಯುನ್ನತ ಪ್ರಶಸ್ತಿ ಸಿಕ್ಕಿವೆ. ಈ ಮೂಲಕ ರಾಜ್ಯದ 8 ಮಂದಿಗೆ ಈ ಬಾರಿ ಪ್ರಶಸ್ತಿ ಬಂದಿದೆ ಎಂದ ಸಿ.ಟಿ.ರವಿ, ಈ ಹಿಂದೆ ಪದ್ಮಶ್ರೀ ಪ್ರಶಸ್ತಿಗೆ ದೊಡ್ಡ ಲಾಭಿ ನಡೆಯುತ್ತಿತ್ತು. ಆದರೆ ಈಗ ಎಲೆಮರೆಕಾಯಿಯಾಗಿ ಕೆಲಸ ಮಾಡುತ್ತಿರುವವರಿಗೆ ಪ್ರಶಸ್ತಿ ಹುಡುಕಿಕೊಂಡು ಬರುತ್ತಿವೆ ಎಂದು ಸಂತಸ ಹಂಚಿಕೊಂಡರು.
‘ಪದ್ಮ’ ಪ್ರಶಸ್ತಿಗೆ ನೈಜ ಅರ್ಹತೆಯನ್ನೇ ಮಾನದಂಡವನ್ನಾಗಿ ಮೋದಿ ಸರ್ಕಾರ ಪರಿಗಣಿಸಿದೆ; ನಳಿನ್