ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಎನಿಸಿದ ‘ಪದ್ಮ’ ಪ್ರಶಸ್ತಿಗೆ ಪಾತ್ರರಾಗಿರುವ ಕರ್ನಾಟಕದ 8 ಜನ ಸಾಧಕರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಅಭಿನಂದಿಸಿದ್ದಾರೆ.
ಸಾರ್ವಜನಿಕ ಸೇವೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಡಾ.ಎಸ್.ಎಲ್.ಭೈರಪ್ಪ, ಸಮಾಜಸೇವೆಗೆ ಶ್ರೀಮತಿ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಒಲಿದಿದೆ. ಕಲಾ ಕ್ಷೇತ್ರದ ಶ್ರೀಮತಿ ರಾಣಿ ಮಾಚಯ್ಯ, ಮುನಿವೆಂಕಟಪ್ಪ, ಷಾ ರಶೀದ್ ಅಹ್ಮದ್ ಖಾದ್ರಿ, ವಿಜ್ಞಾನ ಮತ್ತು ತಂತ್ರಜ್ಞಾನ- ಖಾದರ್ ವಲ್ಲಿ ದಡೇಕುಲ, ಪ್ರಾಚ್ಯವಸ್ತು ಸಂಶೋಧನೆ- ಎಸ್.ಸುಬ್ಬರಾಮನ್ ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರೆಲ್ಲರಿಗೂ ಅಭಿನಂದನೆಗಳು. ಈ ಅಪೂರ್ವ ಸಾಧಕರು ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
‘ಪದ್ಮ’ ಪ್ರಶಸ್ತಿಗೆ ನೈಜ ಅರ್ಹತೆಯನ್ನೇ ಮಾನದಂಡವನ್ನಾಗಿ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಕೇಂದ್ರದ ಅವರ ಸಂಪುಟವು ಪರಿಗಣಿಸುತ್ತಿದೆ. ಇದರಿಂದ ಈ ಪ್ರಶಸ್ತಿಯ ಘನತೆಯೂ ಹೆಚ್ಚಾಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದು, ಕೇಂದ್ರ ಸರಕಾರಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ.