ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್’ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಜಮ್ಮುಕಾಶ್ಮೀರಕ್ಕೆ ಪ್ರವಾಸ ತೆರಳಿರುವ ಕನ್ನಡೀರನೇಕರು ಆತಂಕದಲ್ಲಿದ್ದು ರಾಜ್ಯಕ್ಕೆ ಮರಳಲು ಪರದಾಡುತ್ತಿದ್ದಾರೆ.
ಈ ನಡುವೆ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿಯಯನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ Tour Operators & Travel Agents ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಸಹಾಯವಾಣಿಗೆ ನೀಡಬೇಕೆಂದು ಸರ್ಕಾರ ತಿಳಿಸಿದೆ. ಪ್ರವಾಸಿಗರ ಸಂಬಂಧಿಕರು ಅಥವಾ ಸಾರ್ವಜನಿಕರು ಪ್ರವಾಸಿಗರ ವಿವರಗಳನ್ನು ಸಹಾಯವಾಣಿ ಸಂಖ್ಯೆಗಳಾದ 080-43344334, 080-43344335, 080-43344336, 080-43344342 ಗೆ ನೀಡಬೇಕೆಂದು ಸರ್ಕಾರ ಮನವಿ ಮಾಡಿದೆ.