ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ದಿಢೀರ್ ವಿದ್ಯಮಾನ ನಡೆದಿದ್ದು, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿದೆ.
ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರೂ ಆಗಿರುವ ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಸ್ಲಾಮಾಬಾದಿನ ಹೈಕೋರ್ಟ್ ಹೊರಗೆ ಇಂದು ಅವರನ್ನು ಬಂಧಿಸಲಾಗಿದೆ.
Another arrest video of Imran Khan. pic.twitter.com/uOg8FV2dGn
— Ihtisham Ul Haq (@iihtishamm) May 9, 2023
ಆಗಸ್ಟ್ 20 ರಂದು ಎಫ್ -9 ಪಾರ್ಕ್ನಲ್ಲಿ ನಡೆದ ರ್ಯಾಲಿಯಲ್ಲಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಝೀಬಾ ಚೌಧರಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಖಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಫೆಬ್ರವರಿ 28 ರಂದು ಫೆಡರಲ್ ರಾಜಧಾನಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು. ಈ ನಡುವೆ, ಇಸ್ಲಾಮಾಬಾದಿನ ಹೈಕೋರ್ಟ್ ಹೊರಗೆ ಅವರು ಬಂಧನಕ್ಕೊಳಗಾಗಿದ್ದಾರೆ.