ಬೆಂಗಳೂರು: ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.
“ನಾಸೀರ್ ಹುಸೇನ್ ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗಿದ ಘಟನೆಗಳು ಅತ್ಯಂತ ಖಂಡನೀಯ” ಎಂದು ಜೋಶಿ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರವನ್ನು ಪಡೆದಾಗ ಅಥವಾ ಚುನಾವಣಾ ವಿಜಯೋತ್ಸವ ಸಂದರ್ಭಗಳಲ್ಲಿ ದೇಶ ವಿರೋಧಿ ಒಲವು ಮತ್ತು ಪಾಕಿಸ್ತಾನದ ಪರವಾದ ಭಾವನೆಗಳನ್ನು ಹೊಂದಿರುವ ಅಂಶಗಳು ಸೃಷ್ಟಿಯಾಗುತ್ತವೆ ಎಂದ ಅವರು ಪಾಕ್ ಪರ ಘೋಷಣೆ ಖಂಡನೀಯ ಎಂದರು. ಈ ವಿಚಾರದಲ್ಲಿ ಕಾನೂನು ಜಾರಿ ಅಧಿಕಾರಿಗಳು, ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೋಶಿ ಒತ್ತಾಯಿಸಿದರು.