ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಸರ್ಕಾರದ ಆದೇಶ ಪತ್ರ ಇದೀಗ ಸಮುದಾಯದ ಜಗದ್ಗುರುಗಳಿಗೆ ಹಸ್ತಾಂತರಗೊಂಡಿದೆ. ಈ ಸನ್ನಿವೇಶವನ್ನು ಕಾಣುವ ಸಮುದಾಯದ ಬಹುಕಾಲದ ಕನಸು ಇದೀಗ ನನಸಾಗಿದೆ. ಇನ್ನು ಮುಂದೆ ಒಬಿಸಿ ಮೀಸಲಾತಿಗಾಗಿ ಹೋರಾಟಕ್ಕೆ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಯಾರಿ ನಡೆಸಿದ್ದಾರೆ.
ರಾಜ್ಯದಲ್ಲಿ ಪ್ರಬಲ ಸಮುದಾಯವಾಗಿರುವ ಪಂಚಮಸಾಲಿ ಲಿಂಗಾಯತರಿಗೆ 2ಎ ಪ್ರವರ್ಗದಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಸುಮಾರು ಎರಡೂವರೆ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇತ್ತು. ಸರ್ಕಾರ ಆಗೊಮ್ಮೆ ಈಗೊಮ್ಮೆ ಭರವಸೆ ನೀಡುತ್ತಾ ವಂಚಿಸುತ್ತಿದ್ದುದರಿಂದಾಗಿ ಸುಮಾರು ಎರಡೂವರೆ ತಿಂಗಳ ಕಾಲ ಕೂಡಲಸಂಗಮದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿರಂತರ ಸತ್ಯಾಗ್ರಹ ನಡೆಯಿತು. ಈ ಸತ್ಯಾಗ್ರಹಕ್ಕೆ ಬೆಚ್ಚಿದ ಸರ್ಕಾರ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಡಿ ಮೀಸಲಾತಿ ಕಲ್ಪಿಸಿದೆ.
ಈ ಮೂಲಕ ಜಯಭೇರಿಯ ಸಂತಸದಿಂದ ಬೀಗಿದ ಸಮುದಾಯದ ಮಂದಿ ಇದೀಗ ಕೇಂದ್ರ ಸರ್ಕಾರದ ಮೀಸಲಾತಿಯೂ ಸಿಗಬೇಕೆಂಬ ನಿಟ್ಟಿನಲ್ಲಿ ಹೋರಾಟ ನಡೆಯಬೇಕಿದೆ ಎಂಬ ಸಲಹೆಯನ್ನು ಮುಂದಿಟ್ಟಿದ್ದಾರೆ. ಇಡೀ ಪಂಚಮಸಾಲಿ ಲಿಂಗಾಯತ ಸಮುದಾಯದ ಹಿತಕ್ಕಾಗಿ ಹೋರಾಡುತ್ತಿರುವ ಬಸವಜಯ ಮೃತ್ಯುಂಜಯ ಶ್ರೀಗಳು ಈ ವಿಚಾರವನ್ನೂ ಗಂಭೀರವಾಗಿ ಪರಿಗಣಿಸಿದ್ದಾರೆ.
ಈ’ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಶ್ರೀಗಳು, ಚುನಾವನೆ ನೀತಿ ಸಂಹಿತೆ ಜಾರಿ ಇರುವುದರಿಂದ ಹೋರಾಟಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿದೆ. ಚುನಾವಣೆ ನಂತರ ಮೀಸಲಾತಿ ಹೆಚ್ಚಳಗಾಗಿ ಕೆಂದ್ರ ಒಬಿಸಿಗಾಗಿ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.