ಬೆಂಗಳೂರು: ರಾಜ್ಯದಲ್ಲಿ ವಿವಿದ ಸಮುದಾಯಗಳಿಂದ ಮೀಸಲಾತಿಗಾಗಿ ಹೋರಾಟ ಸಾಗಿದ್ದು ವಾರಾಂತ್ಯದ ಭಾನುವಾರವಾದ ನಾಳೆ ಬೆಂಗಳೂರಿನಲ್ಲಿ ಪಂಚಮಸಾಲಿ ಸಮುದಾಯ ಶಕ್ತಿಪ್ರದರ್ಶನ ನಡೆಸಲಿದೆ. ಸುಮಾರು ಒಂದು ಲಕ್ಷ ಜನರು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಫೆಬ್ರವರಿ 21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಸ್ಥಳ ಪರಿಶೀಲನೆ ನಡೆಸಿದರು.
ಬಳಿಕ ನಡೆದ ಸಮಾಲೋಚನಾ ಸಭೆಯಲ್ಲಿ ಕೂಡಲಸಂಗಮದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ , ಹರಿಹರ ಪೀಠದ ಶ್ರೀ ವಚನಾನಂದ ಸ್ವಾಮೀಜಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಮೋಹನ್ ಲಿಂಬಿಕಾಯಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಸಮುದಾಯದ ವಿವಿಧ ಮುಖಂಡರು ಉಪಸ್ಥಿತರಿದ್ದರು.