ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕೂಡಲ ಸಂಗಮ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮಿಜಿ ನೇತೃತ್ವದಲ್ಲಿ ಸಿದ್ಧತೆ ನಡೆದಿದ್ದು, ಈ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಬಿಗಿ ಬಂದೋಬಸ್ತ್ ಕೈಗೊಂಡಿದೆ.
ಇದೇ ವೇಳೆ, ಲಿಂಗಾಯತ ಪಂಚಮಸಾಲಿ ಪಂಚಮಸಾಲಿ ಪ್ರಥಮ ಪೀಠದ ಸಮಾಜದವತಿಯಿಂದ 2a ಹೋರಾಟದ ವಿರುದ್ಧ ಹೋರಾಡಿಸಿರುವ ಆದೇಶವನ್ನು ವಾಪಸು ಪಡೆಯಬೆಕು.ಇಲ್ಲದಿದ್ದರೆ ಸುವರ್ಣ ವಿಧಾನ ಸೌಧದ ಮುಂದೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮಿಜಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆನೀಡಿದ್ದಾರೆ.
ತಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಶ್ರೀಗಳು, ಹೋರಾಟದ ವಿರುದ್ಧ ಹೋರಾಡಿಸಿರುವ ಆದೇಶವನ್ನು ವಾಪಸು ಪಡೆಯದಿದ್ದಲ್ಲಿ ಎಲ್ಲಾ ತಾಲೂಕು ಕಚೇರಿಗಳಿಗೆ ಬೀಗ ಜಡಿದು ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.