ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ಇದೀಗ ಸರ್ಕಾರ ರಚನೆಯ ತಯಾರಿಯಲ್ಲಿದೆ. ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ಬಗ್ಗೆ ಕಾಂಗ್ರೆಸ್ ವರಿಷ್ಠರು ತೀರ್ಮಾನ ಕೈಗೊಂಡ ಬೆನ್ನಲ್ಲೇ ಸರ್ಕಾರ ರಚನೆಯ ಪ್ರಕ್ರಿಯೆಗೂ ಮುನ್ನುಡಿ ಬರೆಯಲಾಗಿದೆ.
ಈ ಸಂಬಂಧ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾಗಿ ರಾಜ ಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದರು. 2023ರ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲುವು ಕಂಡಿರುವ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸುವ ಬಗ್ಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲಾಟ್ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮಾಹಿತಿ ನೀಡಿದರು.
























































