ಬೆಂಗಳೂರು: ಪೆಗಾಸಿಸ್ ಗೂಢಾಚರ್ಯೆ ಆರೋಪ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿಚಾರದಲಿ ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ, ಈ ಹಿಂದೆ ತಮ್ಮ ಬಗ್ಗೆಯೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗೂಢಚರ್ಯೆ ನಡೆಸಿತ್ತು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಹೆಚ್ಡಿಕೆ, ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು ಎಂದಿದ್ದಾರೆ.
ಪೆಗಾಸಿಸ್ ಗೂಢಾಚರ್ಯೆಯಲ್ಲಿ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂಥ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು.1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 20, 2021
ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು. ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ ಎಂದವರು ಹೇಳಿದ್ದಾರೆ.
ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು. ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ.2/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 20, 2021
ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣುಕದು ಎಂಬುದಕ್ಕೆ ಖಚಿತತೆ ಇದೆಯೇ ? ಅಂತ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ. ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು ಎಂದಿದ್ದಾರೆ.
ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣುಕದು ಎಂಬುದಕ್ಕೆ ಖಚಿತತೆ ಇದೆಯೇ? ಅಂತ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ. ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು.3/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 20, 2021