ಬೆಂಗಳೂರು: ಪೆನ್ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣದ ಸುಳಿಯಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ದಿಢೀರ್ ಪ್ರತ್ಯಕ್ಷರಾಗಿದ್ದಾರೆ.
ತಮ್ಮ ವಿರುದ್ದದ ಆರೋಪ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿಸುತ್ತಿದ್ದಂತೆಯೇ ವಿದೇಶಕ್ಕೆ ಹಾರಿದ್ದ ಪ್ರಜ್ವಲ್ ರೇವಣ್ಣ, ಪ್ರಕರಣ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದು, ಇಡೀ ಪ್ರಕರಣ ದೇಶ-ವಿದೇಶಗಳ ಮಾಧ್ಯಮಗಳಲ್ಲಿ ಪ್ರತಿಧ್ವನಿಸಿದ್ದರೂ ಪ್ರಜ್ವಲ್ ರೇವಣ್ಣ ಅವರ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ.
ಈ ನಡುವೆ, ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ ಆರೋಪಿಗಳಾದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೊಟೀಸ್ ನೀಡಿದೆ. ಈ ನೊಟೀಸ್ ಸ್ವೀಕರಿಸಿರುವ ಹೆಚ್.ಡಿ.ರೇವಣ್ಣ ಅವರು ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದಾರೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ಕೂಡಾ ತಾವು ವಕೀಲರ ಮೂಲಕ ಪೊಲೀಸರನ್ನು ಸಂಪರ್ಕಿಸಿರುವುದಾಗಿ ತಿಳಿಸಿದ್ದಾರೆ.
ಇಷ್ಟೂ ದಿನ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಪ್ರಜ್ವಲ್ ರೇವಣ್ಣ ಅವರು ಇಂದು ಸಾಮಾಜಿಕ ಜಾಲತಾಣದಲ್ಲಿ ಪ್ರತ್ಯಕ್ಷರಾಗಿದ್ದಾರೆ. ‘ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ’ ಎಂದು ಪ್ರಜ್ವಲ್ ರೇವಣ್ಣ ಅವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ.
ಸತ್ಯ ಆದಷ್ಟು ಬೇಗ ಹೊರಬರಲಿದೆ.
As I am not in Bangalore to attend the enquiry, I have communicated to C.I.D Bangalore through my Advocate. Truth will prevail soon. pic.twitter.com/lyU7YUoJem
— Prajwal Revanna (@iPrajwalRevanna) May 1, 2024