ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (GST) ವ್ಯಾಪ್ತಿಯೊಳಗೆ ಸೇರಿಸಲು ಕೇಂದ್ರ ಸರ್ಕಾರ ಬಯಸಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
#WATCH | On being asked about bringing fuel under GST, Union Finance Minister Nirmala Sitharaman says “…At the moment, the intention of the GST as it was brought in by former Finance Minister Arun Jaitley is to have the petrol and diesel in GST. It is up to the states to decide… pic.twitter.com/SoKpm3hlbI
— ANI (@ANI) June 22, 2024
ಜಿಎಸ್‌ಟಿ ಮಂಡಳಿ ಸಭೆಯ ಕುರಿತು ಶನಿವಾರ ಮಾಹಿತಿ ಹಂಚಿಕೊಂಡಿರುವ ಅವರು, ಪೆಟ್ರೋಲ್, ಡೀಸೆಲ್ ಕೂಡ ಜಿಎಸ್‌ಟಿ ವ್ಯಾಪ್ತಿಯೊಳಗೆ ಸೇರಿಸಲು ಕೇಂದ್ರ ಸರ್ಕಾರ ಬಯಸಿದೆ. ಆದರೆ ಅದನ್ನು ನಿರ್ಧರಿಸುವುದು ರಾಜ್ಯಗಳಿಗೆ ಬಿಟ್ಟಿದ್ದು ಎಂದರು.