ನವದೆಹಲಿ: ಕೆಲವು ದಿನಗಳ ಹಿಂದಷ್ಟೇ ಅಡುಗೆ ಅನಿಲ ದರ ಪ್ರತೀ ಸಿಲಿಂಡರ್ಗೆ 100 ರೂಪಾಯಿ ಇಳಿಕೆ ಮಾಡಿರುವ ಕೇಂದ್ರ ಸರ್ಕಾರ ಇದೀಗ ಪೆಟ್ರೋಲ್ ದರವನ್ನೂ ಇಳಿಕೆ ಮಾಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶಾದ್ಯಂತ ಲೀಟರ್ಗೆ ತಲಾ 2 ರೂಪಾಯಿ ಕಡಿಮೆ ಮಾಡಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ,
ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 2 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೇಶದ ಪ್ರತಿಷ್ಠಿತ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಂತರ ಭಾರತೀಯರ ಕುಟುಂಬದ ಕಲ್ಯಾಣ ತಮ್ಮ ಗುರಿ ಎಂಬುದನ್ನು ಮತ್ತೊಮ್ಮೆ ಸಾರಿದ್ದಾರೆ ಎಂದು ಹೇಳಿದ್ದಾರೆ.
पेट्रोल और डीज़ल के दाम ₹2 रुपये कम करके देश के यशस्वी प्रधानमंत्री श्री @narendramodi जी ने एक बार फिर साबित कर दिया कि करोड़ों भारतीयों के अपने परिवार का हित और सुविधा सदैव उनका लक्ष्य है।
वसुधा का नेता कौन हुआ?
भूखण्ड-विजेता कौन हुआ?
अतुलित यश क्रेता कौन हुआ?
नव-धर्म… https://t.co/WFqoTFnntd pic.twitter.com/vOh9QcY26C— Hardeep Singh Puri (मोदी का परिवार) (@HardeepSPuri) March 14, 2024