ಬೆಂಗಳೂರು: ಫೋನ್ ಟ್ಯಾಪಿಂಗ್ ಗುಮ್ಮ ಬಿಎಸ್‌ವೈ ಎದುರಾಳಿ ಬಿಜೆಪಿ ಶಾಸಕರನ್ನಷ್ಟೇ ಅಲ್ಲ, ಪ್ರತಿಪಕ್ಷಗಳ ನಾಯಕರಲ್ಲೂ ಆತಂಕ ಸೃಷ್ಟಿಸಿದೆ. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ತಮ್ಮ ಪೋನ್ ಟ್ಯಾಪಿಂಗ್ ನಡೆದಿರುವ ಸಧ್ಯತೆಗಳ ಕುರಿತು ಸಭಾಧ್ಯಕ್ಷರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿರುವ ಬೆನ್ನಲ್ಲೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಇದೇ ರೀತಿಯ ಗಂಭೀರ ಆರೋಪ ಮಾಡಿದ್ದಾರೆ.
ಪೋನ್ ಕದ್ದಾಲಿಕೆಯನ್ನು ಬಹಿರಂಗಪಡಿಸುವ ಧೈರ್ಯ ತೋರಿದ ಶಾಸಕ ಅರವಿಂದ ಬೆಲ್ಲದ ಅವರ ಪೋನ್ ಮಾತ್ರವಲ್ಲ, ಇತರ ಭಿನ್ನಮತೀಯ ಶಾಸಕರು ಮತ್ತು ವಿರೋಧಪಕ್ಷದ ನಾಯಕರ ಪೋನ್ ಗಳ ಕದ್ದಾಲಿಕೆ ನಡೆದಿರುವ ಸಾಧ್ಯತೆಗಳೂ ಇವೆ. ಈ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಯಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪೋನ್ ಕದ್ದಾಲಿಕೆಯನ್ನು ಬಹಿರಂಗಪಡಿಸುವ ಧೈರ್ಯ ತೋರಿದ ಶಾಸಕ ಅರವಿಂದ ಬೆಲ್ಲದ ಅವರನ್ನು ಅಭಿನಂದಿಸುತ್ತೇನೆ.
ಅವರೊಬ್ಬರ ಪೋನ್ ಮಾತ್ರವಲ್ಲ, ಇತರ ಭಿನ್ನಮತೀಯ ಶಾಸಕರು ಮತ್ತು ವಿರೋಧಪಕ್ಷದ ನಾಯಕರ ಪೋನ್ ಗಳ ಕದ್ದಾಲಿಕೆ ನಡೆದಿರುವ ಸಾಧ್ಯತೆಗಳೂ ಇವೆ.
ಸಮಗ್ರ ಸ್ವರೂಪದ ತನಿಖೆ ನಡೆಯಲಿ.#NoTrustWithinBJP
3/7— Siddaramaiah (@siddaramaiah) June 17, 2021
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ತನ್ನ ಪೋನ್ ಟ್ಯಾಪ್ ಆಗಿದೆ ಎಂಬ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಆರೋಪದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆ ತರಬೇಕು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.
ತನ್ನ ಪೋನ್ ಟ್ಯಾಪ್ ಆಗಿದೆ ಎಂಬ @BJP4Karnataka ಭಿನ್ನಮತೀಯ ಶಾಸಕ ಅರವಿಂದ್ ಬೆಲ್ಲದ ಆರೋಪದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆ ತರಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ.#NoTrustwithinBJP
1/7 pic.twitter.com/K79YhAViy1— Siddaramaiah (@siddaramaiah) June 17, 2021
ಪೋನ್ ಕದ್ದಾಲಿಕೆಯ ಆರೋಪದ ಗುರಿ ಮುಖ್ಯಮಂತ್ರಿಯವರೇ ಆಗಿರುವುದರಿಂದ ರಾಜ್ಯಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆಯಿಂದ ತನಿಖೆ ನಡೆಸಿದರೂ ಸತ್ಯ ಸಂಗತಿ ಹೊರಬರಲಾರದು. ಹೈಕೋರ್ಟ್ ಹಾಲಿ ನ್ಯಾಯಾಧೀಶರ ತನಿಖೆಯೇ ಸೂಕ್ತ ಎಂದವರು ಪ್ರತಿಪಾದಿಸಿದ್ದಾರೆ.
ಪೋನ್ ಕದ್ದಾಲಿಕೆಯ ಆರೋಪದ ಗುರಿ @CMofKarnataka ಅವರೇ ಆಗಿರುವುದರಿಂದ ರಾಜ್ಯಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆಯಿಂದ ತನಿಖೆ ನಡೆಸಿದರೂ ಸತ್ಯ ಸಂಗತಿ ಹೊರಬರಲಾರದು. ಹೈಕೋರ್ಟ್ ಹಾಲಿ ನ್ಯಾಯಾಧೀಶರ ತನಿಖೆಯೇ ಸೂಕ್ತ.#NoTrustWithinBJP
2/7 pic.twitter.com/uf0cEV7DqN— Siddaramaiah (@siddaramaiah) June 17, 2021
ಪೋನ್ ಕದ್ದಾಲಿಕೆ ನಡೆಸಲು ಶಾಸಕ ಅರವಿಂದ್ ಬೆಲ್ಲದ್ ಅವರೇನು ಕ್ರಿಮಿನಲ್ ವ್ಯಕ್ತಿಯೇ?ದೇಶದ್ರೋಹಿಯೇ? ಶಾಸಕರ ವಿಶ್ವಾಸ ಕಳೆದುಕೊಂಡಿರುವ ಬಿಎಸ್‌ವೈ ಅವರು ಕುರ್ಚಿ ಉಳಿಸಿಕೊಳ್ಳಲು ಇಂತಹ ಕೀಳುಮಟ್ಟಕ್ಕೆ ಇಳಿದಿರುವುದು ದುರದೃಷ್ಟಕರ ಎಂದಿರುವ ಸಿದ್ದರಾಮಯ್ಯ, ಶಾಸಕ ಅರವಿಂದ್ ಬೆಲ್ಲದ್ ತಮ್ಮ ಆರೋಪದಲ್ಲಿ ಕ್ರಿಮಿನಲ್ ಕೃತ್ಯಗಳ ಆರೋಪ ಹೊತ್ತು ಜೈಲಲ್ಲಿರುವ ಯುವರಾಜ ಸ್ವಾಮಿ ಎಂಬ ವ್ಯಕ್ತಿಯ ಹೆಸರು ಪ್ರಸ್ತಾಪಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಒಡನಾಟದಲ್ಲಿದ್ದ ಈ ವ್ಯಕ್ತಿಯ ಪಾತ್ರದ ಬಗ್ಗೆಯೂ ತನಿಖೆಯಾಗಲಿ ಎಂದು ಹೇಳಿದ್ದಾರೆ.
ಪೋನ್ ಕದ್ದಾಲಿಕೆಯ ಆರೋಪದಲ್ಲಿ ಮುಖ್ಯಮಂತ್ರಿಯವರೇ ಆರೋಪಿ ಸ್ಥಾನದಲ್ಲಿರುವುದರಿಂದ, ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಕ್ಷಣ ಮಧ್ಯೆ ಪ್ರವೇಶಿಸಿ ಪ್ರಕರಣದ ತನಿಖೆಗೆ ಆದೇಶಿಸುವ ಮೂಲಕ ಸದನದ ಸದಸ್ಯರಿಗೆ ರಕ್ಷಣೆ ನೀಡಲು ಮುಂದಾಗಬೇಕು ಎಂದೂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.