ದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ನೆಲೆಗಳ ಭಾರತೀಯ ಸೇನೆ ಪಿನ್ ಪಾಯಿಂಟ್ ದಾಳಿ ಮಾಡಿ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸ ಮಾಡಿದೆ.
ಭಾರತದ ಗಡಿಯೊಳಗೆ ಉಗ್ರರನ್ನು ನುಸುಳಿಸಲು ಪಾಕಿಸ್ತಾನ ಸೇನೆ ಅವಕಾಶ ನೀಡುತ್ತಿತ್ತೆನ್ನಲಾಗಿದೆ. ಇದೇ ಸಂದರ್ಭದಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಿನ್ ಪಾಯಿಂಟ್ ದಾಳಿ ಮಾಡಿದೆ.
ಪಿಒಕೆಯಲ್ಲಿನ ಉಗ್ರರ ಲಾಂಚ್ ಪ್ಯಾಡ್ ಮತ್ತು ಉಗ್ರ ಶಿಬಿರಗಳ ಮೇಲೆ ನಡೆದ ದಾಳಿಯಲ್ಲಿ ಹತ್ತಾರು ಉಗ್ರರು ಸಾವನ್ನಪ್ಪಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಈ ಸೇನಾ ದಾಳಿಯಲ್ಲಿ ನಾಗರಿಕರ ಸಾವು ನೋವು ಸಂಭವಿಸಿಲ್ಲ ಎಂದು ಹೇಳಿದೆ.