ದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು
ಮುಖ್ಯಮಂತ್ರಿಯವರ ಕಾರ್ಯದರ್ಶಿ ಗಿರೀಶ್ ಹೊಸೂರ್ ಜೊತೆಗಿದ್ದರು. ಬಿಎಸ್‌ವೈ-ಮೋದಿ ಭೇಟಿ ಬಗ್ಗೆ ಪ್ರಧಾನಿ ಕಚೇರಿ ಕೂಡಾ ಟ್ವೀಟ್ ಮಾಡಿ ಫೊಟೋ ಹಂಚಿಕೊಂಡಿದೆ.
Karnataka CM Shri @BSYBJP met PM @narendramodi. @CMofKarnataka pic.twitter.com/k9xUUH47ZO
— PMO India (@PMOIndia) July 16, 2021