ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12ರಂದು ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ ನೀಡಲಿದ್ದಾರೆ. ಮಹತ್ವಾಕಾಂಕ್ಷೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ, ಸುಮಾರು 16,000 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಕಾಮಗಾರಿಗಳಿಗೆ ಮುನ್ನುಡಿ ಬರೆಯಲಿದ್ದಾರೆ.
ಈ ಕುರಿತಂತೆ ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್13ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅವರು ಮಂಡ್ಯದಲ್ಲಿ ಪ್ರಮುಖ ರಸ್ತೆ ಯೋಜನೆಗಳ ಲೋಕಾರ್ಪಣೆ ಮಾಡಲಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದೆ.
ಅಂದು ಮಧ್ಯಾಹ್ನ 3:15 ರ ಸುಮಾರಿಗೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಅಲ್ಲೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.
© 2020 Udaya News – Powered by RajasDigital.