ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಸರಳ ಬಹುಮತ ಪಡೆಯುತ್ತಿದ್ದಂತೆಯೇ ಹೊಸ ಸರ್ಕಾರ ರಚನೆಗೆ ವೇದಿಕೆ ಸಜ್ಜಾಗುತ್ತಿದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದ್ದಾರೆ.
ಕೇಂದ್ರದಲ್ಲಿ ಸರ್ಕಾರ ರಚಿಸುವ ಸಿದ್ಧತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ, ಎನ್ ಡಿಎ ಮೈತ್ರಿಕೂಟವು 292 ಸ್ಥಾನಗಳನ್ನು ಗೆದ್ದಿದ್ದು, ಮೋದಿಯವರು ಈ ಒಕ್ಕೂಟ ಸರ್ಕಾರದ ಪ್ರಧಾನಿಯಾಗಿ ಜೂನ್ 8ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.






















































