ದೆಹಲಿ: ಏಕರೂಪ ನಾಗರಿಕ ಸಂಹಿತೆ ಬಗ್ಗೆ ದೇಶವ್ಯಾಪಿ ಚರ್ಚೆ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಒಂದೇ ದೇಶದಲ್ಲಿ ಎರಡೆರಡು ಕಾನೂನುಗಳು ಇರಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದ “ಮೇರಾ ಬೂತ್ ಸಬ್ಸೆ ಮಜ್‌ಬೂತ್” ಅಭಿಯಾನದ ಅಂಗವಾಗಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆಯ ಅಗತ್ಯವಿದೆ. ಹಾಗಾಗಿಯೇ ಬಿಜೆಪಿ ಪ್ರಣಾಳಿಕೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದೇವೆ ಎಂದರು.
जिन राज्यों में विपक्षी दलों की सरकारें हैं, वो गरीब और मध्यम वर्ग के साथ विश्वासघात कर रही हैं। भाजपा कार्यकर्ताओं को ये सच्चाई लोगों के सामने बार-बार उजागर करनी चाहिए। pic.twitter.com/3GrUAhr2Og
— Narendra Modi (@narendramodi) June 27, 2023
ಒಂದು ಕುಟುಂಬದ ವಿವಿಧ ಸದಸ್ಯರಿಗೆ ವಿಭಿನ್ನ ನಿಯಮಗಳು ಇರುವುದರಿಂದ ಪ್ರಯೋಜನವಾಗದು. ಅದರಂತೆಯೇ ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
‘ಇಸ್ಲಾಂನಲ್ಲಿ ‘ತ್ರಿವಳಿ ತಲಾಖ್’ ಅದರ ಭಾಗವಾಗಿದ್ದರೆ, ಅದನ್ನು ಈಜಿಪ್ಟ್, ಇಂಡೋನೇಷಿಯಾ, ಕತಾರ್, ಜೋರ್ಡಾನ್, ಸಿರಿಯಾ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಂತಹ ಬಹುಪಾಲು ಮುಸ್ಲಿಂ ರಾಷ್ಟ್ರಗಳು ಆಚರಿಸುತ್ತಿಲ್ಲ ಎಂದರು. ಆದರೆ, ನಮ್ಮ ದೇಶದಲ್ಲಿ ವೋಟ್ ಬ್ಯಾಂಕ್‌ಗಾಗಿ ಹಸಿದಿರುವವರು ಮುಸ್ಲಿಂ ಹೆಣ್ಣು ಮಕ್ಕಳಿಗೆ ತೀವ್ರ ಅನ್ಯಾಯ ಮಾಡುತ್ತಿದ್ದಾರೆ. ತ್ರಿವಳಿ ತಲಾಖ್ ಪದ್ದತಿಯಿಂದ ಮಹಿಳೆಯರಿಗೆ ಅನ್ಯಾಯ ಮಾತ್ರವಲ್ಲ, ಇಡೀ ಕುಟುಂಬವನ್ನು ನಾಶಪಡಿಸುತ್ತದೆ ಎಂದರು.




















































