ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧಾರವಾಡ ಹೈಕೋರ್ಟ್ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣ ರದ್ದು ಮಾಡಲು ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿದೆ.
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 3ರಂದು ಬಿಎಸ್ವೈ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಗ್ಗೆ ಪೋಕ್ಸೋ ಆರೋಪ ಬಾಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಗಂಭೀರತೆ ಅರಿತ ಸರ್ಕಾರ ಈ ತನಿಖೆಯನ್ನು ಸಿಐಡಿಗೆ ವರ್ಗಾಸಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರ ಹೇಳಿಕೆಗಳನ್ನು ದಾಖಲಿಸಿತ್ತು.
ಈ ನಡುವೆ, ಪ್ರಕರಣ ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಇದೀಗ ಧಾರವಾಡ ಹೈಕೋರ್ಟ್ ಪೀಠ, ಪ್ರಕರಣ ರದ್ದುಪಡಿಸಲು ನಿರಾಕರಿಸಿತು. ಕೇವಲ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿತು.