ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ಅಕ್ರಮ ಕಸಾಯಿಖಾನೆ ಹಾವಳಿ ಜನರ ನಿದ್ದೆಗೆಡಿಸಿದೆ. ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಭಾರೀ ಅಕ್ರಮವನ್ನು ಬಯಲಿಗೆಳೆದಿದ್ದಾರೆ.
ಸುರತ್ಕಲ್ ಸಮೀಪದ ಕೃಷ್ಣಾಪುರ ಬಳಿ ಅಕ್ರಮ ಕಸಾಯಿಖಾನೆಯೊಂದು ರಹಸ್ಯವಾಗಿ ದಂಧೆಯ ಅಡ್ಡೆಯಾಗಿತ್ತು. ಈ ಬಗ್ಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದಲ್ಲಿ ಸುರತ್ಕಲ್ ಠಾಣಾ ಪೊಲೀಸರು ದಿಢೀರ್ ದಾಳಿ ಕೈಗೊಂಡು 15ಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಿದ್ದಾರೆ.
ಮನೆಯೊಂದರಲ್ಲಿ ಈ ದಂಧೆ ನಡೆಸಲಾಗುತ್ತಿತ್ತು ಎನ್ನಲಾಗಿದ್ದು ಮಾರಾಟಕ್ಕೆ ಸಿದ್ದಪಡಿಸಿದ್ದ ಗೋ ಮಾಂಸ ಹಾಗೂ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ದಾಳಿ ಸಂದರ್ಭದಲ್ಲಿ ಮೂವರು ಆರೋಪಿಗಳು ಪರಾರಿಯಾಗಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.