ಹುಬ್ಬಳ್ಳಿ: ಅಪರಾಧ ಪ್ರಕರಣಗಳಿಗೆ ಅಂಕುಶ ಹಾಕಲು ಹುಬ್ಬಳ್ಳಿ ಧಾರವಾಡ ನಗರ ಪೊಲೀಸರು ಪರಿಣಾಮಕಾರಿ ಕ್ರಮಗಳಿಗೆ ಮುನ್ನುಡಿ ಬರೆದಿದ್ದಾರೆ. ವ್ಯವಸ್ಥೆಗೆ ಸವಾಲಾಗಿದ್ದಾರೆ ಎನ್ನಲಾದ ಸುಮಾರು 131 ಮಂದಿಯನ್ನು ಗಡಿಪಾರು ಮಾಡಲಾಗಿದೆ.
ಈ ಕುರಿತಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ದಿಟ್ಟ ಕ್ರಮ ಕೈಗೊಂಡಿದ್ದು ನಾಗರಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು, ಮಂಗಳೂರು ನಗರಗಳಲ್ಲಿ ನಿಷ್ಟೂರ ಕ್ರಮ ಕೈಗೊಂಡು ಗಮನಸೆಳೆದಿದ್ದ ಶಶಿಕುಮಾರ್, ಇದೀಗ ಹುಬ್ಬಳ್ಳಿ ಧಾರವಾಡ ನಗರಗಳಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದಾರೆ.
ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ 26 ಜನರನ್ನು ಗಡಿಪಾರು ಮಾಡಲಾಗಿದ್ದು, ಒಟ್ಟು 131 ಜನರನ್ನು ಗಡಿಪಾರು ಮಾಡಲಾಗಿರುತ್ತದೆ ಹಾಗೂ ಇಬ್ಬರನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿರುತ್ತದೆ. ಈ ಹಿಂದೆಯೂ ಸಹ ನಾಲ್ವರನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ ವಿವಿಧ ಜಿಲ್ಲೆಗಳ ಕಾರಾಗೃಹದಲ್ಲಿ… pic.twitter.com/DtUnwZDd6m
— HUBBALLI DHARWAD CITY POLICE (@compolhdc) November 27, 2025
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಆಯುಕ್ತ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ 26 ಜನರನ್ನು ಗಡಿಪಾರು ಮಾಡಲಾಗಿದ್ದು, ಒಟ್ಟು 131 ಜನರನ್ನು ಗಡಿಪಾರು ಮಾಡಲಾಗಿರುತ್ತದೆ ಹಾಗೂ ಇಬ್ಬರನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿರುತ್ತದೆ ಎಂದು ವಿವರಿಸಿದ್ದಾರೆ.
ಈ ಹಿಂದೆಯೂ ಸಹ ನಾಲ್ವರನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ ವಿವಿಧ ಜಿಲ್ಲೆಗಳ ಕಾರಾಗೃಹದಲ್ಲಿ ಇರಿಸಲಾಗಿದೆ ಎಂದವರು ತಿಳಿಸಿದ್ದಾರೆ.





















































