ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಕೆಲ ಸಮಯದ ಹಿಂದೆ ಪಾಸಿಟಿವ್ ಸಂಖ್ಯೆಗಳು ಕಡಿನೆಯಾಗುತ್ತಾ ಆಶಾವಾದ ಮೂಡಿತ್ತು. ಆದರೆ ಪ್ರಸಕ್ತ ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ದೃಢಪಡುತ್ತಿದೆ.
ಸೋಮವಾರ ಕೂಡಾ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್ಉಗಳು 2,792 ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,89,804ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಸೋಮವಾರ ಸಂಜೆಯ ಹೊತ್ತಿಗೆ 1,742 ಮಂದಿಗೆ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,29,915ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಈ ನಡುವೆ, ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 16 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,520ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತಬುಲೆಟಿನ್ ಮೂಲಕ ಮಾಹಿತಿ ನೀಡಿದೆ.