ಬೆಂಗಳೂರು: ಶುಕ್ರವಾರ ವಿಧಿವಶರಾದ ನಟ ಪುನೀತ್ ರಾಜ್‍ಕುಮಾರ್ ಅವರ ಅಂತ್ಯಸಂಸ್ಕಾರ ಇಂದು ಬೆಳಿಗ್ಗೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಉಪಸ್ಥಿತರಿದ್ದು ಸರ್ಕಾರದ ಪರವಾಗಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ನಾಯಕರನೇಕರು ಉಪಸ್ಥಿತರಿದ್ದು ಅಂತಿಮ ನಮನ ಸಲ್ಲಿಸಿದರು.
ಸಹೋದರ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸಹಿತ ಡಾ.ರಾಜ್ ಕುಟುಂಬಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುದೀಪ್, ಯಶ್, ಸಾಧುಕೋಕಿಲಾ, ವಿಜಯ ರಾಘವೇಂದ್ರ, ರಾಕ್‌ಲೈನ್ ವೆಂಕಟೇಶ್ ಸಹಿತ ಕನ್ನಡ ಚಿತ್ರರಂಗದ ನಟ-ನಟಿಯರು ದೊಡ್ಮನೆ ಹುಡುಗನಿಗೆ ಅಂತಿಮ ನಮನ ಸಲ್ಲಿಸಿದರು.