ಗುವಾಹಟಿ: ಎನ್‌ಡಿಎ ಅಭ್ಯರ್ಥಿ, ಜೆಡಿಎಸ್ ಪಕ್ಷದ ಪ್ರಜ್ವಲ್ ರೇವಣ್ಣ ಅಶ್ಲೀಲ ಕೇಸ್ ಬಗ್ಗೆ ಬಿಜೆಪಿ ರಾಷ್ಟ್ರೀಯ ನಾಯಕ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ ಪ್ರಕರಣ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಖಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವರೂ ಆಗಿರುವ ಅಮಿತ್ ಶಾ, ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಈ ಪ್ರಕರಣ ಬಗ್ಗೆ ಈವರೆಗೆ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ಅಸ್ಸಾಂನ ಗುವಾಹಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಅಮಿತ್ ಶಾ ಅವರು ಪ್ರಜ್ವಲ್ ಪ್ರಕರಣ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯೆ ನೀಡಿದರು.
#WATCH | Guwahati, Assam: On his fake video, Union Home Minister Amit Shah says “Their (Congress) frustration reached to such a level that they have spread fake videos of me and several other BJP leaders. Chief Ministers, State president and others have also done the work of… pic.twitter.com/Qf6kacMmR4
— ANI (@ANI) April 30, 2024
ಪ್ರಜ್ವಲ್ ಪ್ರಕರಣದ ವಿಷಯದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ ಎಂದ ಅವರು. ಬಿಜೆಪಿ ಯಾವಾಗಲೂ ಮಾತೃಶಕ್ತಿಯ ಜೊತೆಗಿರುತ್ತದೆ ಎಂದರು.
ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವು ಆಘಾತಕಾರಿಯಾಗಿದೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ, ನಾವು ದೇಶದ ಮಾತೃಶಕ್ತಿ, ನಾರಿ ಶಕ್ತಿಯ ಜೊತೆಗೆ ನಿಲ್ಲುತ್ತೇವೆ. ಮಾತೃಶಕ್ತಿಯ ಅವಮಾನವನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಕಠಿಣ ಕ್ರಮ ಕೈಗೊಳ್ಳುವ ಬದಲು ರಾಜಕೀಯ… pic.twitter.com/0INSAgC6pn
— BJP Karnataka (@BJP4Karnataka) April 30, 2024
ಇದು ರಾಜ್ಯದ ಕಾನೂನು ಸುವ್ಯವಸ್ಥೆ ವಿಷಯಯಾಗಿರುವುದರಿಂದ ಈ ಬಗ್ಗೆ ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದ ಅಮಿತ್ ಶಾ, ಸೂಕ್ತ ತನಿಖೆಯಾಗಬೇಕೆಂಬುದು ಬಿಜೆಪಿಯ ಆಶಯವಾಗಿದೆ ಎಂದರು. ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಕೂಡ ಈ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದವರು ಹೇಳಿದರು.