ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ದದ ಅಶ್ಲೀಲ ವೀಡಿಯೋ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಪ್ರಕರಣ ಬಗ್ಗೆ ಬಿಜೆಪಿಯ ನಿಲುವು ಏನೆಂಬ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಮಾಡುತ್ತಾಲೇ ಇದೆ.
ಇದೇ ವೇಳೆ, ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕಾನೂನಿನಡಿ ಎಲ್ಲರೂ ಸಮಾನರು ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಈ ಪ್ಜಕರಣ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ ಎಂದರು. ಕಾನೂನಿನಡಿ ಎಲ್ಲರೂ ಸಮಾನರು. ಸರ್ಕಾರ ತನಿಖೆ ಮಾಡಲು ತಂಡ ರಚಿಸಿದ್ದು, ತೀರ್ಪು ಬಂದ ನಂತರ ಸರ್ಕಾರ ಕ್ರಮ ವಹಿಸಲಿದೆ ಎಂದವರು ಪ್ರತಿಪಾದಿಸಿದರು.