ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಹಾಗೂ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಗತ್ಯ ಹೇಳಿಕೆ ನೀಡದಂತೆ ಸಚಿವ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣ ಬಗ್ಗೆ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ನೀಡುವ ಹೇಳಿಕೆಗಳಿಂದ ತನಿಖೆಯ ದಾರಿ ತಪ್ಪುವ ಸಾಧ್ಯತೆ ಇದೆ.ಹಾಗಾಗಿ ಅನಗತ್ಯ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಕೆಲ ಸೂಚನೆ ನೀಡಿದ್ದಾರೆ. ಪ್ರತಿಕ್ರಿಯೆ ಕೊಡುವಾಗ ಎಚ್ಚರಿಕೆ ವಹಿಸುವಂತೆ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ.