ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್‌ಐಟಿ ಪೊಲೀಸರು ಬಲೇ ಬೀಸಿದ್ದು, ಅದರ ಜೊತೆಯಲ್ಲೇ, ಕರ್ನಾಟಕ ಸರ್ಕಾರದ ಮನವಿಯಂತೆ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಪ್ರಕ್ರಿಯೆಗೂ ಚಾಲನೆ ಸಿಕ್ಕಿದೆ.
ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಪ್ರಕ್ರಿಯೆ ಆರಂಭವಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ಮಾಹಿತಿ ನೀಡಿವೆ.
ಪ್ರಜ್ವಲ್ ರೇವಣ್ಣ ಅವರಪಾಸ್ ಪೋರ್ಟ್ ರದ್ದು ಮಾಡಬೇಕೆಂಬ ಮನವಿಗೆ ಕೇಂದ್ರ ಸರ್ಕಾರ ಸ್ಪಂಧಿಸುತ್ತಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಆರೋಪಿಸಿದ್ದರು. ಇದರ ಬೆನ್ನಲ್ಲೇ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ಸಚಿವಾಲಯ, ಎಸ್‌ಐಟಿಯಿಂದ ಪಾಸ್‌ಪೋರ್ಟ್ ರದ್ದತಿ ಮನವಿ ಬಂದಿದ್ದು ಈ ಬಗ್ಗೆ ಪ್ರಕ್ರಿಯೆ ಸಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದೆ.