ಬೆಂಗಳೂರು: ಸಂಸದ್ ಭವನಕ್ಕೆ ದುಷ್ಕರ್ಮಿಗಳ ಕೃತ್ಯ ಬಗ್ಗೆ ಕಾಂಗ್ರೆಸ್ ತನ್ನದೇ ರೀತಿಯಲ್ಲಿ ವ್ಯಾಖ್ಯಾನಿಸಿದೆ. ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನಿ ನರೇಂದ್ರ ಅವರ ಸಾಮರ್ಥ್ಯದ ಬಗ್ಗೆಯೂ ಟೀಕಾಸ್ತ್ರ ಪ್ರಯೋಗಿಸಿದೆ. 300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ನಿಗೆ ದೇಶ ಕಾಯಲು ಸಾಧ್ಯವೇ? ಎಂದು ಕಾಂಗ್ರೆಸ್ ಪಕ್ಷ ತರಾಟೆಗೆ ತೆಗೆದುಕೊಂಡಿದೆ.
ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ? ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ ಎಂದು ಆರೋಪಿಸಿದೆ.
300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ.
ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ.
ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ನಿಗೆ ದೇಶ ಕಾಯಲು ಸಾಧ್ಯವೇ?
ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ?
ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ.
— Karnataka Congress (@INCKarnataka) December 13, 2023