ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಭಯೋತ್ಪಾದಕರು ಭೀಕರ ಹತ್ಯೆಯನ್ನು ಬಿಜೆಪಿ ಖಂಡಿಸಿದೆ.
ಇದೇ ವೇಳೆ, ತಮ್ಮ ಪಕ್ಷದ ಕಾರ್ಯಕರ್ತನಾದ ಪ್ರವೀಣ್ ಕುಟುಂಬಕ್ಕೆ ಪಕ್ಷವು ಈಗಾಗಲೇ ಮೊದಲ ಹಂತದ ನೆರವು ನೀಡಿದೆ ಹಾಗೂ ಮುಂದೆಯೂ ಸರ್ಕಾರ ಮತ್ತು ಪಕ್ಷ ಜೊತೆಗಿರಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ ತಿಳಿಸಿದ್ದಾರೆ.
ನೊಂದ ಕುಟುಂಬಕ್ಕೆ ಅಲ್ಲಲ್ಲಿ ಪಕ್ಷದ ಹೆಸರಿನಲ್ಲಿ ಖಾಸಗಿ ಧಣ ಸಂಗ್ರಹ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಪಕ್ಷದ ಹೆಸರಿನಲ್ಲಿ ಯಾವುದೇ ರೀತಿಯ ಖಾಸಗಿ ಧಣ ಸಂಗ್ರಹ ಮಾಡಬಾರದು ಎಂದು ಅವರು ಬಿಜೆಪಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.





















































