ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಮನೆ ಕೊಡುಗೆ ನೀಡುವುದಾಗಿ ಹೇಳಿದ್ದ ಬಿಜೆಪಿ ನಾಯಕರು ನುಡಿದಂತೆ ನಡೆದುಕೊಂಡಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಮುಂದಾಳುತ್ವದಲ್ಲಿ ಇಂದು ನೂತನ ಗೃಹ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿದೆ.
ಇತ್ತೀಚೆಗೆ ಮತಾಂಧರ ಧಾಳಿಯಿಂದ ಮೃತರಾದ ಯುವಮೋರ್ಚಾ ಮುಖಂಡ, ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರವೀಣ್ ನೆಟ್ಟಾರುರವರ ಕನಸಿನ ಮನೆಯನ್ನು ನಿರ್ಮಿಸಿ ಕೊಡುವಂತೆ ಬಿಜೆಪಿ ಕಾರ್ಯಕರ್ತರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಿದ್ದರು. ಕಾರ್ಯಕರ್ತನ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಸಂಸದರು ಭರವಸೆ ನೀಡಿದ್ದರು. ಅದರಂತೆ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲು ಅವರು ಕೊಟ್ಟ ಭರವಸೆಯಂತೆ ಇಂದು ಪ್ರವೀಣ್ ನೆಟ್ಟಾರು ರವರ ಕುಟುಂಬಸ್ಥರ ಸಮ್ಮುಖದಲ್ಲಿ ನೂತನ ಮನೆ ನಿರ್ನಾಣಕ್ಕಾಗಿ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣಕನ್ನಡದ ಶಾಸಕರು, ಬಿಜೆಪಿ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮತಾಂಧರಿಂದ ಹತ್ಯೆಯಗಿದ್ದ ನಮ್ಮ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಕನಸಿನ ಮನೆ ನಿರ್ಮಾಣಕ್ಕೆ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.
ಪ್ರವೀಣ್ ಅಮರ್ ರಹೇ… pic.twitter.com/4EWyH9CjFs
— Sanjeeva Matandoor (@s__matandoor) November 2, 2022
ಕೆಲವು ದಿನಗಳ ಹಿಂದಷ್ಟೇ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರಿಗೆ ಮುಖ್ಯಮಂತ್ರಿಯವರ ಮೇಲೆ ಒತ್ತಡ ಹೇರಿ ಸರ್ಕಾರಿ ನೌಕರಿ ದೊರಕಿಸಿಕೊಟ್ಟಿದ್ದರು. ಮುಖ್ಯಮಂತ್ರಿ ಕಚೇರಿ ಸಿಬ್ಬಂದಿಯಾಗಿ ಸರ್ಕಾರ ನೇಮಕ ಮಾಡಿತ್ತು. ನೆಟ್ಟಾರು ಕುಟುಂಬದ ಕೋರಿಕೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾಯಿಸಿಕೊಡುವಲ್ಲಿ ನಳಿನ್ ಕುಮಾರ್ ಯಶಸ್ವಿಯಾಗಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರ ಈ ಕಾಳಜಿ ಕಾರ್ಯಕರ್ತರ ಮೆಚ್ಚುಗೆಗೆ ಪಾತ್ರವಾಗಿದೆ.
ಬಿಜೆಪಿ ಯುವ ಮೋರ್ಚಾ ಸದಸ್ಯ ದಿವಂಗತ ಪ್ರವೀಣ್ ನೆಟ್ಟಾರು ಅವರ ಪತ್ನಿ ಶ್ರೀಮತಿ ನೂತನ ಅವರಿಗೆ ಸರ್ಕಾರ ಗ್ರೂಪ್ ಸಿ ಉದ್ಯೋಗ ನೀಡಿದೆ. ನೂತನ ಅವರು ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.#BJPKarnataka#BJPKodagu pic.twitter.com/3Flern0hLC
— Kanniganda B Ponnappa (Modi Ka Parivar) (@b_ponnappa) October 7, 2022
























































