ಬೆಂಗಳೂರು: ರಾಜ್ಯ ಬಜೆಟ್ ಅಧೀವೇಶನಕ್ಕೆ ದಿನಗಣನೆ ಆರಂಭವಾಗುತ್ತಿದದಂತೆಯೇ ವಿವಿಧ ಇಲಾಖಾ ಮಟ್ಟದಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಡೆಸಿದ ಬಜೆಟ್ ಪೂರ್ವ ಸಭೆ ವಿದ್ಯಮಾನಗಳ ಕೇಂದ್ರಬಿಂದುವಾಯಿತು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಬಜೆಟ್ ಪೂರ್ವ ಸಭೆಯಲ್ಲಿ ಇಲಾಖೆಯ ಆವಶ್ಯಕತೆಗಳ ಬಗ್ಗೆ ಚರ್ಚೆ ನಡೆಯಿತು. 2021-22ನೇ ಸಾಲಿನ ಆಯವ್ಯಯದಲ್ಲಿ ನೀಡಬೇಕಾಗಿರುವ ಅನುದಾನ, ನೀರಾವರಿ ಯೋಜನೆಗಳ ಕಾಮಗಾರಿಗಳು, ಈ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೈಗೊಳ್ಳಬೇಕಾಗಿರುವ ನೀರಾವರಿ ಯೋಜನೆಗಳ ಕುರಿತು ಚಿಂಥನ ಮಂಥನ ನಡೆಸಲಾಯಿತು.
ಈ ಉನ್ನತ ಮಟ್ಟದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮುಖ್ಯ ಕಾರ್ಯದರ್ಶಿ ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಇಲಾಖೆಯ ಕಾರ್ಯದರ್ಶಿ ಅನೀಲ್ ಕುಮಾರ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದು ಮಂಬರುವ ಆರ್ಥಿಕ ವರ್ಷದಲ್ಲಿ ಕೈಗೊಳ್ಳಬೇಕಾದ ಯೋಜನೆಗಳನ್ನು ಸಿಎಂ ಅವರ ಮುಂದಿಟ್ಟರು ಎನ್ಬಲಾಗಿದೆ.