ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ನೇಮಕಗೊಂಡಿದ್ದಾರೆ.
ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆಯಿಂದ ತೆರವಾಗಿರುವ ಈ ಸ್ಥಾನಕ್ಕೆ ಕೇಂದ್ರ ಸರ್ಕಾರ ಈ ನೇಮಕ ಮಾಡಿದ್ದು, ಆಗಸ್ಟ್ 1ರಂದು ಪ್ರೀತಿ ಸೂದನ್ ಅವರು ಅಧಿಕಾರ ಸ್ವೀಕಾರಿಸಲಿದ್ದಾರೆ.
1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರು, ಅವರು, ಹಿಂದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2022 ರಿಂದ UPSC ಸದಸ್ಯರಾಗಿರುವ ಇವರು, ಇದೀಗ ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.


























































