ನವದೆಹಲಿ: ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆಯ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.
ಕೇಂದ್ರ ಸರ್ಕಾರ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಸಂಸತ್ತಿನ ಉಭಯ ಸದನಗಳಲ್ಲೂ ಅಂಗೀಕರವಾಗಿತ್ತು. ಬಳಿಕ ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳುಹಿಸಲಾಗಿತ್ತು. ಸಂಸತ್ತು ಅಂಗೀಕರಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದು, ಅವರ ಅಂಕಿತದೊಂದಿಗೆ ‘ವಕ್ಫ್ ತಿದ್ದುಪಡಿ ಮಸೂದೆ-2025’ ಇದೀಗ ಕಾನೂನಾಗಿ ಮಾರ್ಪಟ್ಟಿದೆ.