ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂಡ ನಂತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗುತ್ತಲೇ ಇವೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಗ್ಯಾರಂಟಿ ಕಾರಣಗಳಿಂದಾಗಿ ಇಂದು ರಾಜ್ಯದ ಜನರು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಹಾಲಿನ ದರ ಏರಿಸಲಾಗಿದೆ, ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಸ್ಟ್ಯಾಂಪ್ ಡ್ಯೂಟಿ, ರಿಜಿಸ್ಟ್ರೇಶನ್ ಶುಲ್ಕ ಮಾತ್ರವಲ್ಲದೆ ವಿವಿಧ ತೆರಿಗೆಗಳನ್ನೂ ಹೆಚ್ಚಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಅಭಿವೃದ್ಧಿ ಒಂದು ಬಿಟ್ಟು ತಲೆ ಬೋಳಿಸುವ ಕೆಲಸ ಮಾಡುವ ಸರ್ಕಾರ ಇದಾಗಿದೆ. ರಾಜ್ಯ ಸರ್ಕಾರದ ಖಜಾನೆ ಪೂರ್ತಿ ಖಾಲಿಯಾಗಿದೆ. ಸರ್ಕಾರದ ದಿನ ದೂಡಲು ಜನತೆಗೆ ಬರೆ ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.
ಗ್ಯಾರಂಟಿ ಕಾರಣಗಳಿಂದಾಗಿ ಇಂದು ರಾಜ್ಯದ ಜನರು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಹಾಲಿನ ದರ ಏರಿಸಲಾಗಿದೆ, ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಸ್ಟ್ಯಾಂಪ್ ಡ್ಯೂಟಿ, ರಿಜಿಸ್ಟ್ರೇಶನ್ ಶುಲ್ಕ ಮಾತ್ರವಲ್ಲದೆ ವಿವಿಧ ತೆರಿಗೆಗಳನ್ನೂ ಹೆಚ್ಚಿಸಲಾಗಿದೆ.
ಅಭಿವೃದ್ಧಿ ಒಂದು ಬಿಟ್ಟು ತಲೆ ಬೋಳಿಸುವ ಕೆಲಸ ಮಾಡುವ ಸರ್ಕಾರ ಇದಾಗಿದೆ. ರಾಜ್ಯ ಸರ್ಕಾರದ… pic.twitter.com/3QQQok6tW2
— BJP Karnataka (@BJP4Karnataka) January 3, 2025