ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ
ಕಾಂಗ್ರೆಸ್ ಪಕ್ಷದ ಬಗ್ಗೆ ನಳೀನ್ ಕುಮಾರ್ ಕಟೀಲ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಪ್ರಿಯಾಂಕ್ ಖರ್ಗೆ, ‘ಯತ್ನಾಳ್ ಅವರು ಸರ್ಕಾರದ ಸಚಿವರನ್ನು ಪಿಂಪ್ ಎಂದು ಕರೆದಿದ್ದಾರೆ. ಈಶ್ವರಪ್ಪ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳದ ಕಟೀಲ್ ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು.
ನಳೀನ್ ಕುಮಾರ್ ಕಟೀಲ್ ಅವರು ಎಂದಾದರೂ ನಾವು ಕಳೆದ ಮೂರೂವರೆ ವರ್ಷಗಳಿಂದ ಇಂತಹ ಜನಪರ ಕಾರ್ಯಕ್ರಮ ಕೊಟ್ಟಿದ್ದೇವೆ, ನಾವು ಮುಂದಿನ ಬಾರಿ ಸರ್ಕಾರ ಬಂದರೆ ಯಾವ ರೀತಿಯ ಕಾರ್ಯಕ್ರಮ ರೂಪಿಸುತ್ತೇವೆ ಎಂಬ ನೀಲ ನಕ್ಷೆ ಕುರಿತು ಮಾತನಾಡಿದ್ದಾರಾ? ಅವರು ಅಭಿವೃದ್ಧಿಯ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎನ್ನುತ್ತಾರೆ. ಇಂತಹವರು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಿದರೆ ನಾವು ಕೇಳಬೇಕೆ? ಎಂದು ಪ್ರಶ್ನಿಸಿದರು.
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲವಾಗಿದೆ ಇದೇ ಕಾರಣಕ್ಕೆ ಪ್ರಧಾನಿ ಮೋದಿ ಅವರು ಚುನಾವಣೆ ಸಮಯದಲ್ಲಿ 40 ಬಾರಿ, ಜೆಪಿ ನಡ್ಡಾ ಹಾಗೂ ಅಮಿತ್ ಶಾ 25ಕ್ಕೂ ಹೆಚ್ಚು ಬಾರಿ ರಾಜ್ಯಕ್ಕೆ ಪೊಲಿಟಿಕಲ್ ಟೂರ್ ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.



























































