ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಡಾ ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎನ್ನಲಾದ ಆರೋಪ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
ಈ ಆರೋಪದ ಬೆನ್ನಲ್ಲೇ ಪ್ರತಿಭಟನೆಗಳು ಭುಗಿಲೆದ್ದಿದೆ. ಇದೇ ವೇಳೆ, ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ವಿಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ತನಿಖೆಗೆ ಕಳುಹಿಸಲಾಗಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದೂ ಅಭಿಪ್ರಾಯ ಪಟ್ಟಿದ್ದಾರೆ.
ದೇಶವಿರೋಧಿ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್.ಎಸ್.ಎಲ್ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. pic.twitter.com/yTWzb8gy7E
— Siddaramaiah (@siddaramaiah) February 28, 2024